ಬಿಮ್ಸ್​ನಲ್ಲಿ ಮತ್ತೊಬ್ಬ ಬಾಣಂತಿ ಸಾವು: ವೈದ್ಯರ ವಿರುದ್ಧ ಆಕ್ರೋಶ

Ravi Talawar
ಬಿಮ್ಸ್​ನಲ್ಲಿ ಮತ್ತೊಬ್ಬ ಬಾಣಂತಿ ಸಾವು: ವೈದ್ಯರ ವಿರುದ್ಧ ಆಕ್ರೋಶ
WhatsApp Group Join Now
Telegram Group Join Now

ಬೆಳಗಾವಿ, ಡಿಸೆಂಬರ್ 23: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ಹುಕ್ಕೇರಿ ತಾಲೂಕಿನ ಗೌಡವಾಡದ ವೈಶಾಲಿ ಕೊಟಬಾಗಿ ಅವರಿಗೆ 4 ದಿನಗಳ ಹಿಂದಷ್ಟೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹುಕ್ಕೇರಿ ತಾಲೂಕು ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ವೈದ್ಯರಿಲ್ಲ ಎಂದು ಬೆಳಗಾವಿ ಬಿಮ್ಸ್​ಗೆ ಸ್ಥಳಾಂತರ ಮಾಡಿದ್ದರು. ಶನಿವಾರ ಬೆಳಗ್ಗೆ ಬಿಮ್ಸ್​ನಲ್ಲಿ ವೈಶಾಲಿಗೆ ಸಿಜೇರಿಯನ್ ಆಗಿದ್ದು, ಹೆಣ್ಣು ಮಗುವಿಗೆ ಜನ್ಮಕೊಟ್ಟಿದ್ದಾರೆ.

ಐದು ದಿನ ಹಿಂದಷ್ಟೇ ಆ್ಯನಿವರ್ಸರಿ ಆಚರಿಸಿಕೊಂಡಿದ್ದ ಮಹಿಳೆ

5 ದಿನದ ಹಿಂದಷ್ಟೇ ವೈಶಾಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಚೊಚ್ಚಲ ಹೆರಿಗೆ ಖುಷಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಈಗ ಏಕಾಏಕಿ ವೈಶಾಲಿ ಮೃತಪಟ್ಟಿರುವುದರಿಂದ, ರೊಚ್ಚಿಗೆದ್ದ ಕುಟುಂಬದವರು ಮೃತ ಬಾಣಂತಿ ಶವವನ್ನು ಪೋಸ್ಟ್​​ಮಾರ್ಟಂಗೆ ಕೊಟ್ಟಿರಲಿಲ್ಲ. ನಂತರ ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಂಎಲ್‌ಸಿ ಮಾಡಿಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಮರಣೋತ್ತರ ಪರೀಕ್ಷೆ ನಡೆಸಿ ಬಾಣಂತಿ ಶವ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದಲ್ಲಿ ವೈಶಾಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು.

WhatsApp Group Join Now
Telegram Group Join Now
Share This Article