ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Ravi Talawar
ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್
WhatsApp Group Join Now
Telegram Group Join Now

ಬೆಳಗಾವಿ : “ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಅಂದು 1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಹಾರ್ ಲಾಲ್ ನೆಹರು ಹಾಗೂ ಕರ್ನಾಟಕದವರಾದ ಗಂಗಾಧರ ದೇಶಪಾಂಡೆ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರಿಬ್ಬರು ಸೇರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಮಾಡಿದರು” ಎಂದು ತಿಳಿಸಿದರು.

 

WhatsApp Group Join Now
Telegram Group Join Now
Share This Article