ಕಿಮ್ಸ್‌ಗೆ ಮೇಜರ್‌ ಸರ್ಜರಿ ಮಾಡಲು ಮುಂದಾದ ಸರ್ಕಾರ

Ravi Talawar
ಕಿಮ್ಸ್‌ಗೆ ಮೇಜರ್‌ ಸರ್ಜರಿ ಮಾಡಲು ಮುಂದಾದ ಸರ್ಕಾರ
WhatsApp Group Join Now
Telegram Group Join Now

ಧಾರವಾಡ: ಕಿಮ್ಸ್‌ ಉತ್ತರ ಕರ್ನಾಟಕದ ಆಶಾಕಿರಣವಾಗಿದೆ. ಇಲ್ಲಿಗೆ ಧಾರವಾಡ ಜಿಲ್ಲೆಯಿಂದ ಮಾತ್ರವಲ್ಲದೆ. ಉತ್ತರ ಕನ್ನಡ, ಹಾವೇರಿ, ಗದಗ, ಬಳ್ಳಾರಿ, ವಿಜಯನಗರ ಸೇರಿದಂತೆ ಸುತ್ತಮುತ್ತಲಿಮ ರಾಜ್ಯಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಚಿಕಿತ್ಸೆಗೆ ದಾಖಲಾಗುತ್ತಾರೆ.

ಹಲವು ಗಂಭೀರ ಕಾಯಿಲೆಗಳಿಗೂ ಇಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕಿಮ್ಸ್‌ ಆಸ್ಪತ್ರೆಯಲ್ಲಿನ ವೈದ್ಯಕೀಯ ವ್ಯವಸ್ಥೆಯ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಹುಬ್ಬಳ್ಳಿಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು 9 ಜನ ಗಾಯಗೊಂಡಿದ್ದರೆ, ಅದರಲ್ಲಿ 8 ಜನರ ಸ್ಥಿತಿ ಚಿಂತಾ ಜನಕವಾಗಿದೆ ಎಂದು ಹೇಳಲಾಗಿದೆ.

ಆದರೆ, ಈ ರೀತಿ ಗಂಭೀರವಾಗಿ ಗಾಯಗೊಂಡವರಿಗೆ ಇಲ್ಲಿನ ವೈದ್ಯರು ಸೂಕ್ತ ಚಿಕಿತ್ಸೆ ನೀಡಿಲ್ಲ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪಕ್ಷಾತೀತವಾಗಿ ಖಂಡನೆ ವ್ಯಕ್ತವಾಗಿದೆ. Also Read ಹುಬ್ಬಳ್ಳಿಯಲ್ಲಿ ಸಿಲಿಂಡರ್‌ ಬ್ಲಾಸ್ಟ್‌: 8 ಜನರ ಸ್ಥಿತಿ ಗಂಭೀರ, ಕಿಮ್ಸ್‌ ವೈದ್ಯರಿಗೆ ಪ್ರಹ್ಲಾದ ಜೋಶಿ ತರಾಟೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಿಮ್ಸ್‌ ವೈದ್ಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ರೀತಿ ನಿರ್ಲಕ್ಷ್ಯ ಧೋರಣೆ ಅನುಸರಿಸಿದ ವೈದ್ಯರನ್ನು ಅಮಾನತು ಮಾಡಿ ಎಂದಿದ್ದಾರೆ.

ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಸಹ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೋವಿ* ಸಮಯದಲ್ಲಿ ಅತ್ಯುತ್ತಮ ಸೇವೆ ನೀಡಿದ್ದ ಕಿಮ್ಸ್‌ ತನ್ನ ಪ್ರತಿಷ್ಠೆ ಹಾಗೂ ವರ್ಚಸ್ಸನ್ನು ಹೆಚ್ಚಿಸಿಕೊಂಡಿತ್ತು. ಆದರೆ, ಇದಾದ ಮೇಲೆ ಅದೇ ಮಾದರಿಯನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಎಡವಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. ಇದೀಗ ಕಿಮ್ಸ್‌ಗೆ ಮೇಜರ್‌ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ.

WhatsApp Group Join Now
Telegram Group Join Now
Share This Article