ಬೆಳಗಾವಿ.ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿ ಡಾ.ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.