ದಕ್ಷಿಣ ಕೊರಿಯಾ ಭೀಕರ ವಿಮಾನ ದುರಂತ; 179 ಮಂದಿ ಸಾವು

Ravi Talawar
ದಕ್ಷಿಣ ಕೊರಿಯಾ ಭೀಕರ ವಿಮಾನ ದುರಂತ; 179 ಮಂದಿ ಸಾವು
WhatsApp Group Join Now
Telegram Group Join Now

ಸಿಯೋಲ್​(ದಕ್ಷಿಣ ಕೊರಿಯಾ): ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಭೀಕರ ವಿಮಾನ ದುರಂತ ಸಂಭವಿಸಿದೆ. ವಿಮಾನದಲ್ಲಿದ್ದ 181 ಜನರ ಪೈಕಿ 179 ಜನ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಇಲಾಖೆ ಹೇಳಿದೆ. ದುರಂತದಲ್ಲಿ ಜೆಜು ಏರ್ ವಿಮಾನ ಸಂಪೂರ್ಣ ಸುಟ್ಟು ಹೋಗಿದೆ. ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಹೊರತುಪಡಿಸಿ ಎಲ್ಲ 179 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಕ್ಕಿ ಡಿಕ್ಕಿ ಹಾಗೂ ಪ್ರತಿಕೂಲ ವಾತಾವರಣ ವಿಮಾನ ಅಪಘಾತಕ್ಕೆ ಕಾರಣವಾಗಿರಬಹುದು. ಆದರೆ ತನಿಖೆ ಬಳಿಕವೇ ಸೂಕ್ತ ಕಾರಣ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಆಗಿದ್ದೇಗೆ ?: ದಕ್ಷಿಣ ಕೊರಿಯಾದ ನೈರುತ್ಯದಲ್ಲಿರುವ ಮುವಾನ್ ವಿಮಾನ ನಿಲ್ದಾಣದಲ್ಲಿ ಜೆಜು ಏರ್ ವಿಮಾನದ ಲ್ಯಾಂಡಿಂಗ್ ಗೇರ್ ಫೇಲ್ ಆದ ಪರಿಣಾಮ ಈ ದುರಂತ ನಡೆದಿದೆ ಎಂದು ಆರಂಭದಲ್ಲಿ ಅಧಿಕಾರಿಗಳು ಅಂದಾಜಿಸಿದ್ದರು.

ಏರ್ಪೋ​ರ್ಟ್​ ರನ್​ವೇಯಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ರನ್​ವೇಗೆ ಅಪ್ಪಳಿಸಿ ಬಳಿಕ ಕೊನೆಯಲ್ಲಿದ್ದ ಬೇಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ತುರ್ತು ಸೇವಾ ಕಚೇರಿ ಮಾಹಿತಿ ನೀಡಿದೆ. ಈ ವಿಮಾನ ಬ್ಯಾಂಕಾಕ್‌ನಿಂದ ದಕ್ಷಿಣ ಕೊರಿಯಾಕ್ಕೆ ಆಗಮಿಸಿದ ವೇಳೆ ಘಟನೆ ನಡೆದಿದೆ. ಬೆಂಕಿ ನಂದಿಸಲು 32 ಅಗ್ನಿಶಾಮಕ ವಾಹನಗಳು ಮತ್ತು ಹೆಲಿಕಾಪ್ಟರ್​ಗಳನ್ನು ನಿಯೋಜಿಸಲಾಗಿತ್ತು.

WhatsApp Group Join Now
Telegram Group Join Now
Share This Article