ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ನಿಂದನೆ ಪ್ರಕರಣ ರಾಜ್ಯಪಾಲರ ಅಂಗಳಕ್ಕೆ

Ravi Talawar
ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ನಿಂದನೆ ಪ್ರಕರಣ ರಾಜ್ಯಪಾಲರ ಅಂಗಳಕ್ಕೆ
WhatsApp Group Join Now
Telegram Group Join Now

ಬೆಂಗಳೂರು, ಡಿಸೆಂಬರ್ 30: ಡಿಸೆಂಬರ್ 19 ರ ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ತಾರಕಕ್ಕೇರುತ್ತಿದ್ದಂತೆ, ಎದ್ದು ನಿಂತಿದ್ದ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ಬೈದಾಡಿಕೊಂಡಿದ್ದರು. ಸದನದಲ್ಲೇ ರವಿ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣವನ್ನೂ ದಾಖಲಿಸಿದ್ದರು. ಪ್ರಕರಣದ ಹಿನ್ನೆಲೆ ಹಿರೇಬಾಗೇವಾಡಿ ಪೊಲೀಸರು ರವಿಯನ್ನ ಬಂಧಿಸಿದ್ದೂ ಆಯ್ತು, ಕೋರ್ಟ್​ ಸೂಚನೆ ಮೇರೆಗೆ ರಿಲೀಸ್​ ಮಾಡಿದ್ದೂ ಆಯ್ತು. ಕೊನೆಗೆ ಈಗ

ಇನ್ನು ಈಗಾಗಲೇ ಅಂದರೆ, ಡಿಸೆಂಬರ್ 25ರಂದೇ ಎರಡೂ ಪ್ರಕರಣಗಳು ಸಿಐಡಿಗೆ ವರ್ಗಾವಣೆಯಾಗಿದೆ. ಆದರೂ ಇದುವರೆಗೂ ಸಿಐಡಿ ತಂಡ ಬೆಳಗಾವಿಗೆ ಭೇಟಿ ನೀಡಿಲ್ಲ. ಸದ್ಯದಲ್ಲೇ ಸಿಐಡಿ ಟೀಂ ಬೆಳಗಾವಿಗೆ ತಲುಪಲಿದೆ. ಆದರೆ ಸಿಐಡಿಗೆ ಇಲ್ಲೊಂದು ಸವಾಲು ಎದುರಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ದೂರಿನನ್ವಯ ಸ್ಥಳ ಮಹಜರು ನಡೆಸಬೇಕಾದರೆ ಸುವರ್ಣಸೌಧಕ್ಕೆ ಕಾಲಿಡಬೇಕು. ಆದರೆ, ಪರಿಷತ್​ ಸಭಾಪತಿ ಬಸವರಾಜ್ ಹೊರಟ್ಟಿ ಸ್ಥಳ ಮಹಜರಿಗೆ ಅವಕಾಶ ಕೊಡಲ್ಲ ಅಂತ ಖಡಾಖಂಡಿತವಾಗಿ ನುಡಿದಿದ್ದಾರೆ. ಹೀಗಾಗಿ ಸಿಐಡಿ ಮುಂದಿನ ಯೋಜನೆ ಏನು ಎಂಬುದು ಇನ್ನೂ ಗೌಪ್ಯವಾಗಿಯೇ ಇದೆ.

ಇನ್ನು ಡಿ.22 ರಂದು ಸಿ.ಟಿ.ರವಿ ಮೇಲೆ ಹಲ್ಲೆ ಸಂಬಂಧ ಅಪರಿಚಿತರ ವಿರುದ್ಧ ದೂರು ದಾಖಲಾಗಿತ್ತು. ಹಿರೇಬಾಗೇವಾಡಿ ಪೊಲೀಸರು ಖುದ್ದು ಸ್ವಯಂಪ್ರೇರಿತ ಕೇಸ್​ ದಾಖಲಿಸಿಕೊಂಡಿದ್ದರು. ಆದರೆ, ದೂರು ದಾಖಲಾಗಿ 8 ದಿನಗಳಾದರೂ ಇನ್ನೂ ಆರೋಪಿಗಳು ಮಾತ್ರ ಪತ್ತೆಯಾಗಿಲ್ಲ. ಇದರಿಂದ ಸಿಡಿದಿರುವ ಪರಿಷತ್ ಸದಸ್ಯ ಸಿ.ಟಿ.ರವಿ, ಯಾಕೆ ಗೂಂಡಾಗಳನ್ನ ಇದುವರೆಗೂ ಬಂಧಿಸಿಲ್ಲ. ನಾನು ಕೊಟ್ಟಿರುವ ದೂರಿನಲ್ಲಿ ಹೆಸರು ದಾಖಲಿಸಿದ್ದರೂ ಅಪರಿಚಿತರು ಎಂದು ನಮೂದಿಸಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸದ್ಯ ಸಿಐಡಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಲು ತಯಾರಿ ನಡೆಸಿದ್ದಾರೆ. ಈಗಾಗಲೇ ಎರಡು ಘಟನಾವಳಿಗಳ ಕುರಿತು ಮಾಹಿತಿ ಪಡೆದಿರುವ ಸಿಐಡಿ ತನಿಖೆ ಇನ್ನಷ್ಟು ಚುರುಕುಗೊಳಿಸಿದೆ.

WhatsApp Group Join Now
Telegram Group Join Now
Share This Article