ʼದಲಿತ ದೌರ್ಜನ್ಯ ಚರ್ಚೆ ಆಗಬೇಕುʼ ದಲಿತ ಸಭೆ ಸಹಿಸದವರಿಗೆ ತಕ್ಕ ಉತ್ತರ: ಗೃಹಮಂತ್ರಿ ಸವಾಲ್‌

Ravi Talawar
ʼದಲಿತ ದೌರ್ಜನ್ಯ ಚರ್ಚೆ ಆಗಬೇಕುʼ ದಲಿತ ಸಭೆ ಸಹಿಸದವರಿಗೆ ತಕ್ಕ ಉತ್ತರ: ಗೃಹಮಂತ್ರಿ ಸವಾಲ್‌
WhatsApp Group Join Now
Telegram Group Join Now

ಬೆಂಗಳೂರು, ಜನವರಿ 8: ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್​ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಅಷ್ಟೆ. ಸಭೆ ನಡೆಸುತ್ತೇವೆ ಎಂದಿದ್ದಾರೆ.

ಹೈಕಮಾಂಡ್​ಗೆ ಡಿಸಿಎಂ ಡಿಕೆ ಶಿವಕುಮಾರ್ ದೂರು ನೀಡಿದ್ದಾರೆಯೇ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಆ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ಈ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್​​ರನ್ನೂ ಕರೆಯಬೇಕು ಎಂದು ಚರ್ಚೆ ಆಗಿತ್ತು. ರಾಜಕಾರಣ ಮಾಡುವುದಾದರೆ ಓಪನ್ ಆಗಿಯೇ ಮಾಡುತ್ತೇವೆ. ಮುಚ್ಚಿಟ್ಟು ಮಾಡುವಂಥದ್ದೇನೂ ಇಲ್ಲ ಎಂದರು.

ಸದ್ಯದ ಮಟ್ಟಿಗೆ ಸಭೆ ಮುಂದಕ್ಕೆ ಹಾಕಿದ್ದೇವೆ. ಮತ್ತೆ ದಿನಾಂಕ ನಿಗದಿ ಆದಾಗ ತಿಳಿಸುತ್ತೇವೆ. ಏನಾಗಿದೆ ಎಂದು ಎಲ್ಲವನ್ನೂ ಹೇಳಲು ಆಗುವುದಿಲ್ಲವಲ್ಲ ಎಂದು ಪರಮೇಶ್ವರ್ ಹೇಳಿದರು.

WhatsApp Group Join Now
Telegram Group Join Now
Share This Article