ದೆಹಲಿ ಶಾಲೆಗಳಿಗೆ 23 ಬಾಂಬ್ ಬೆದರಿಕೆ ಹಿಂದೆ ವಿದ್ಯಾರ್ಥಿಯ ಕೈವಾಡ!

Ravi Talawar
ದೆಹಲಿ ಶಾಲೆಗಳಿಗೆ 23 ಬಾಂಬ್ ಬೆದರಿಕೆ ಹಿಂದೆ ವಿದ್ಯಾರ್ಥಿಯ ಕೈವಾಡ!
WhatsApp Group Join Now
Telegram Group Join Now

ದೆಹಲಿ: ವಿವಿಧ ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆಯ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಕೈವಾಡವಿದೆ ಎಂಬುದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ತಾನು ಈ ಹಿಂದೆಯೂ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್, ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ. ಬಾಂಬ್ ಬೆದರಿಕೆಗಳು ಶಾಲಾ ಅಧಿಕಾರಿಗಳಲ್ಲಿ ಭೀತಿಯನ್ನು ಉಂಟು ಮಾಡಿತ್ತು. ದೆಹಲಿ ಪೊಲೀಸರು ಈ ವಾರ ಇಂತಹ ಬಿಕ್ಕಟ್ಟುಗಳನ್ನು ಎದುರಿಸಲು ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗೆ ತರಬೇತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮದರ್ಸ್ ಇಂಟರ್‌ನ್ಯಾಶನಲ್ ಸ್ಕೂಲ್, ಮಾಡರ್ನ್ ಸ್ಕೂಲ್, ಸ್ಪ್ರಿಂಗ್‌ಡೇಲ್ ಸ್ಕೂಲ್, ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್, ಸೇಂಟ್ ಕೊಲಂಬಾಸ್ ಸ್ಕೂಲ್, ಸಲ್ವಾನ್ ಪಬ್ಲಿಕ್ ಸ್ಕೂಲ್, ಅಮಿಟಿ ಇಂಟರ್‌ನ್ಯಾಶನಲ್ ಸ್ಕೂಲ್, ಏರ್ ಫೋರ್ಸ್ ಬಾಲ್ ಭಾರತಿ, ವಸಂತ್ ವಿಹಾರ್‌ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಆರ್‌ಕೆ ಪುರಂಗೆ ಇಮೇಲ್ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article