ಚಿಕ್ಕಮಗಳೂರು, ಜನವರಿ 11: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ (CT Ravi) ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. “ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ. ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬೆದರಿಕೆ ಪತ್ರದಲ್ಲಿ ಏನಿದೆ?
15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ ಹುಷಾರಾಗಿ ಇರಿ ಎಂಬ ಬೆದರಿಕೆ ಪತ್ರ ಬಂದಿದೆ.