ಬಲರಾಮನ ದಿನಗಳು ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ

Ravi Talawar
ಬಲರಾಮನ ದಿನಗಳು ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ
WhatsApp Group Join Now
Telegram Group Join Now
     ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು  ನಿರ್ಮಿಸುತ್ತಿರುವ ಹಾಗೂ ಆ ದಿನಗಳು ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್
ನಾಯಕರಾಗಿ ನಟಿಸುತ್ತಿರುವ ‘ಬಲರಾಮನ ದಿನಗಳು’ ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ ಅಭಿನಯಿಸುತ್ತಿದ್ದಾರೆ.
     ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಅತುಲ್ ಕುಲಕರ್ಣಿ, ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿದ್ದಾರೆ.
ಪ್ರಸ್ತುತ ಅತುಲ್ ಕುಲಕರ್ಣಿ ಅವರು ‘ಬಲರಾಮನ ದಿನಗಳು’ ಚಿತ್ರದಲ್ಲೂ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅತುಲ್ ಕುಲಕರ್ಣಿ ಅವರಿಗೆ ಸ್ವಾಗತ ಕೋರಿದೆ.
     ‘ಬಲರಾಮನ ದಿನಗಳು’ ಚಿತ್ರದ ನಾಯಕಿಯಾಗಿ ಪ್ರಿಯಾ ಆನಂದ್  ಅಭಿನಯಿಸುತ್ತಿದ್ದಾರೆ. 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ನೀಡುತ್ತರುವ 50 ನೇ ಚಿತ್ರ ಹಾಗೂ ಕನ್ನಡದಲ್ಲಿ ಮೊದಲ ಚಿತ್ರವಾಗಿದೆ.
WhatsApp Group Join Now
Telegram Group Join Now
Share This Article