ಮೈಸೂರು, ಜನವರಿ 16: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನ ಆವರಣದಲ್ಲಿ ಡಿಸೆಂಬರ್ 31 ರಂದು ಚಿರತೆ ಕಾಣಿಸಿಕೊಂಡು ಸಂಸ್ಥೆಯ ಎಲ್ಲ ಸಿಬ್ಬಂದಿಯಲ್ಲಿ ಆತಂಕ ಹುಟ್ಟಿಸಿತ್ತು. ಚಿರತೆಯ ಓಡಾಟವನ್ನು ಸಿಸಿಟಿವಿಯಲ್ಲಿ ಕಂಡ ಸಿಬ್ಬಂದಿ ಹೌಹಾರಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಹೋದಡೆಯೆಲ್ಲಾ ಹುಡುಕಾಟ ನಡೆಸಿದ್ದರು. ಆದರೆ, 16 ದಿನಗಳಿಂದ ಹುಡುಕಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ.
ಸದ್ಯ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಕೈಬಿಡಲಾಗಿದ್ದು, ರಾತ್ರಿ ನಿಗಾ ಇರಲಿದೆ. ಜತೆಗೆ ಕ್ಯಾಮರಾ ಮೂಲಕ ಕಾರ್ಯಾಚರಣೆ ಹಾಗೂ ಸಿಬ್ಬಂದಿ ಗಸ್ತು ಮುಂದುವರಿಯಲಿದೆ. ಸದ್ಯ ಇನ್ಫೋಸಿಸ್ ಸಿಬ್ಬಂದಿ ವರ್ಕ್ ಫ್ರಮ್ ಹೋಮ್ನಲ್ಲಿದ್ದು, ಚಿರತೆ ಸಿಗದಿದ್ದರೆ ಮುಂದೇನು ಎಂಬ ಆತಂಕ ಕಾಡುತ್ತಿದೆ.