ಬೆಳಗಾವಿ : ಐತಿಹಾಸಿಕ ಗಾಂಧಿಭಾರತ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾರವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸ್ವಾಗತಿಸಿದರು.
ಇದೇ ಸಮಯದಲ್ಲಿ ಪ್ರಿಯಾಂಕಾ ಗಾಂಧಿಯವರು, ರಸ್ತೆ ಅಪಘಾತದ ಮಾಹಿತಿ ಪಡೆದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.