ಬ್ರಿಮ್ಸ್ ವೈದ್ಯರ ಎಡವಟ್ಟು; ಹೆರಿಗೆ ವೇಳೆ ನವಜಾತ ಶಿಶುಗಳ ಮೂಳೆ ಮುರಿತ

Ravi Talawar
ಬ್ರಿಮ್ಸ್ ವೈದ್ಯರ ಎಡವಟ್ಟು; ಹೆರಿಗೆ ವೇಳೆ ನವಜಾತ ಶಿಶುಗಳ ಮೂಳೆ ಮುರಿತ
WhatsApp Group Join Now
Telegram Group Join Now

ಬೀದರ್, ಜನವರಿ 22: ಬೀದರ್​ನ ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ ಹೆರಿಗೆ ವೇಳೆಯಲ್ಲಿ ಎರಡು ಹಸುಗೂಸುಗಳ ಕಾಲಿನ ಮೂಳೆ ಮುರಿದಿರುವ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೀದರ್ ತಾಲೂಕಿನ ಚಿಲ್ಲರ್ಗಿ ಗ್ರಾಮದ ಶ್ರೀದೇವಿ ಎಂಬುವರು 2024 ರ ಡಿಸೆಂಬರ್ 28 ರಂದು ಹೆರಿಗೆಗೆ ದಾಖಲಾಗಿದ್ದರು. ಸಹಜ ಹೆರಿಗೆ ಆಗುತ್ತದೆಂದು ವೈದ್ಯರು ಹೇಳಿದ್ದರು. ಆದರೆ, ನಂತರ ಸಹಜ ಹೆರಿಗೆ ಕಷ್ಟ ಎಂದು ಸಿಸೇರಿಯನ್ ಹೆರಿಗೆ ಮಾಡಿಸಿದ್ದಾರೆ. ಹೆರಿಗೆ ಆದ ನಂತರ ಎರಡು ಗಂಟೆ ಕಳೆದರೂ ಮಗು ಕಾಲು ಅಲ್ಲಾಡಿಸಲಾಗಿದೆ ಅಳುವುದಕ್ಕೆ ಪ್ರಾರಂಭಿಸಿದೆ. ಹಸುಗೂಸಿನ ಕುಟುಂಬದ ಸದಸ್ಯರು ಮಗು ಅಳುವುದನ್ನು ನೋಡಿ ವೈದ್ಯರಿಗೆ ತೋರಿಸಿದ್ದಾರೆ. ವೈದ್ಯರು ಸ್ಕ್ಯಾನ್ ಮಾಡಿಸಿದಾಗ ಮಗುವಿನ ಬಲಗಾಲಿನ ತೊಡೆಯ ಮೂಳೆ ಮುರಿದಿರುವುದು ಗೊತ್ತಾಗಿದೆ.

ಮೂಳೆ ಮುರಿದಿರುವ ಬಗ್ಗೆ ವೈದ್ಯರನ್ನು ಪ್ರಶ್ನಿಸಿದಾಗ, ಸಿಸೇರಿಯನ್ ಮಾಡುವಾಗ ಮೂಳೆ ಮುರಿದಿದೆ. ಇದೆಲ್ಲಾ ಸಹಜ ಎಂದು ಹೇಳಿ ಕುಟುಂಬಸ್ಥರನ್ನು ಹೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ, ನಮಗೆ ನ್ಯಾಯ ಬೇಕು ಎಂದು ಶ್ರೀದೇವಿ ಗಂಡ ರಾಜು ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಹೆರಿಗೆ ವೇಳೆ ಮುರಿಯಿತು ಮತ್ತೊಂದು ಶಿಶುವಿನ ಕಾಲುಬೀದರ್ ಮಂಗಲಪೇಟ್ ನಿವಾಸಿ ರೂಪಾರಾಣಿ ನಾಗೇಂದ್ರ ಮಡಿವಾಳ ಎಂಬುವರು ಡಿಸೆಂಬರ್ 14 ರಂದು ಬ್ರಿಮ್ಸ್ ಆಸ್ಪತ್ರೆಗೆ ಹೆಸರಿಗೆಗೆಂದು ತೆರಳಿದ್ದರು. ಬ್ರಿಮ್ಸ್ ವೈದ್ಯರು ಆಕೆಗೆ ನಾರ್ಮಲ್ ಹೆರಿಗೆ ಮಾಡಿಸಿದ್ದಾರೆ. ಇದೇ ವೇಳೆ ಮಗುವಿನ ಕಾಲು ಮುರಿದಿದ್ದಾರೆ.

WhatsApp Group Join Now
Telegram Group Join Now
Share This Article