ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರದ ಬಳಿ ಇಂದು ಬೆಳಗ್ಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 10 ಜನ ಮೃತಪಟ್ಟಿದ್ದರು. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೇ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ಈಗಾಗಲೇ 3 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ.
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಮೋದಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.