ಬೆಂಗಳೂರು, ಜನವರಿ 24: ಕರ್ನಾಟಕ ಹಿಂದೂ ಧಾರ್ಮಿಕಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳಿಗೆ ಅನುಮೋದನೆ ನೀಡದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಶೀತಲ ಸಮರ ಮುಂದುವರೆದಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಿದ್ದ ಕರ್ನಾಟಕ ಮಿನರಲ್ಸ್ ಹಕ್ಕು ಮತ್ತು ಬೇರಿಂಗ್ ಲ್ಯಾಂಡ್ ಟ್ಯಾಕ್ಸ್ ಬಿಲ್ 2024, ಕರ್ನಾಟಕ ಹಿಂದೂ ಧಾರ್ಮಿಕಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ 2024, ಕರ್ನಾಟಕ ಸಹಕಾರಿ ಸೊಸೈಟಿ ಗಳ ತಿದ್ದುಪಡಿ ವಿಧೇಯಕ 2024 ಮತ್ತು ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ 2024 ಅಂಗೀಕಾರವಾಗಿತ್ತು. ಅನುಮೋದನೆಗಾಗಿ ರಾಜ್ಯಪಾಲರ ಕಚೇರಿಗೆ ಕಳುಹಿಸಲಾಗಿತ್ತು. ಆದರೆ, ವಿಧೇಯಕದ ಬಗ್ಗೆ ಸ್ಪಷ್ಟನೆ ಕೋರಿ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಸ್ಸು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ ರಾಜ್ಯಪಾಲರ ನಡೆಯಿಂದ ಆಕ್ರೋಶಗೊಂಡಿರುವ ರಾಜ್ಯ ಸರ್ಕಾರ ಕಾನೂನು ಹೋರಾಟ ನಡೆಸಲು ಮುಂದಾಗಿದೆ. ರಾಜ್ಯಪಾಲರ ನಡೆ ವಿರುದ್ಧ ಕಾನೂನು ಕ್ರಮದ ಮೊರೆ ಹೋಗಲು ರಾಜ್ಯ ಸರ್ಕಾರದ ಚಿಂತನೆ ನಡೆಸಿದೆ. ಇನ್ನು ನಾಲ್ಕು ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲರು ಬಾಕಿ ಉಳಿಸಿಕೊಂಡಿದೆ.