ಮೈಕ್ರೋ ಫೈನಾನ್ಸ್‌ ಹಾವಳಿ: ಆರ್​​ಬಿಐ ನಿಯಮದಂತೆ ನಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚನೆ

Ravi Talawar
ಮೈಕ್ರೋ ಫೈನಾನ್ಸ್‌ ಹಾವಳಿ: ಆರ್​​ಬಿಐ ನಿಯಮದಂತೆ ನಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚನೆ
WhatsApp Group Join Now
Telegram Group Join Now

ಬೆಂಗಳೂರು, ಜನವರಿ 25: ಸಾಲ ವಸೂಲಾತಿಗೆ ರೌಡಿಶೀಟರ್​​​ಗಳು, ಗೂಂಡಾಗಳನ್ನು ಬಳಸಲೇಬಾರದು. ಸಾಲ ವಸೂಲಾತಿ ಜವಾಬ್ದಾರಿಯನ್ನು ಫೈನಾನ್ಸ್​ಗಳು ಔಟ್​​ಸೋರ್ಸ್ ಕೊಡಬಾರದು. ಹಾಗೆ ಮಾಡಿದ್ದೇ ಆದರೆ ಅಂಥವರ ವಿರುದ್ಧ ಕೇಸು ದಾಖಲಿಸಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆಂದು ಸಿಎಂ ಸಿದ್ದರಾಮಯ್ಯ ಶನಿವಾರ ಖಡಕ್ ಸಂದೇಶ ರವಾನಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೈಕ್ರೋಫೈನಾನ್ಸ್ ಅಸೋಸಿಯೇಷನ್ ಅಭಿಪ್ರಾಯ ಪಡೆದಿದ್ದೇನೆ. ಆರ್​​​ಬಿಐ ಅಧಿಕಾರಿಗಳ ಅಭಿಪ್ರಾಯವನ್ನೂ ಕೇಳಿದ್ದೇನೆ. ಯಾರಿಗೂ ಸಾಲ ಕೊಡಬೇಡಿ ಎಂದು ನಾವು ಹೇಳುವುದಿಲ್ಲ. ಆದರೆ ವಸೂಲಿ ಮಾಡುವಾಗ ಕಿರುಕುಳ ಕೊಡಲೇಬಾರದು. ಆರ್​​ಬಿಐ ನಿಯಮದಂತೆ ನಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಅನಧಿಕೃತ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕಾನೂನು ತರುತ್ತೇವೆ. ಕಾನೂನು ಇಲಾಖೆ, ಗೃಹ ಇಲಾಖೆ, ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು. ನೆರೆ ರಾಜ್ಯಗಳಲ್ಲಿರುವ ಕಾನೂನು ಪರಿಶೀಲಿಸಿ ಹೊಸ ಕಾನೂನು ಜಾರಿಗೆ ತರುತ್ತೇವೆ. ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನನ್ನು ತರುತ್ತೇವೆ. ಒಂದು ವೇಳೆ ಸಾಲಗಾರರಿಗೆ ಕಿರುಕುಳ ನೀಡಿದರೆ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

WhatsApp Group Join Now
Telegram Group Join Now
Share This Article