ಕಾಂಗ್ರೆಸ್ ನೇತೃತ್ವದ ಸರ್ಕಾರವು 2028ರವರೆಗೆ ಉಳಿಯುವುದಿಲ್ಲ: ಎಚ್‌ಡಿ ಕುಮಾರಸ್ವಾಮಿ ಭವಿಷ್ಯ

Ravi Talawar
ಕಾಂಗ್ರೆಸ್ ನೇತೃತ್ವದ ಸರ್ಕಾರವು 2028ರವರೆಗೆ ಉಳಿಯುವುದಿಲ್ಲ: ಎಚ್‌ಡಿ ಕುಮಾರಸ್ವಾಮಿ ಭವಿಷ್ಯ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು 2028ರವರೆಗೆ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚುತ್ತಿರುವ ಅತೃಪ್ತಿಯೇ ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ 2028 ರವರೆಗೂ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ, ಇದು ಯಾವಾಗ ಸ್ಫೋಟಗೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ, ಆದರೆ ಕಾದು ನೋಡೋಣ. ಪ್ರತಿಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಹೇಳುವುದು ಸರಿಯಲ್ಲ ಎಂದರು.

‘ನಾವು ಅವರ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿರುವುದು ನಿಜವಲ್ಲ; ಅವರ ಶಾಸಕರು ಮತ್ತು ಜನರೇ ಈ ಸರ್ಕಾರದ ಅಡಿಪಾಯವನ್ನು ಅಸ್ಥಿರಗೊಳಿಸುತ್ತಿದ್ದಾರೆ. ಹಣಕಾಸಿನ ಮುಗ್ಗಟ್ಟಿನಿಂದಾಗಿ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ, ಇದು ಪಕ್ಷದೊಳಗೆ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ’ ಎಂದು ದೂರಿದರು.

ಸರ್ಕಾರದ ಕಾರ್ಯವೈಖರಿ ಬಗ್ಗೆ ಶಾಸಕರಲ್ಲಿ ವ್ಯಾಪಕ ಅಸಮಾಧಾನವಿದ್ದು, ಶೀಘ್ರವೇ ಅದು ಬಯಲಿಗೆ ಬರಲಿದೆ. ಸರ್ಕಾರ ಬೀಳಲು ಕಾರಣವಾಗುತ್ತದೆ ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Share This Article