ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Ravi Talawar
ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
WhatsApp Group Join Now
Telegram Group Join Now

ರಾಯಚೂರು, ಫೆಬ್ರವರಿ 6: ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಹೇಯ ಕೃತ್ಯ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಸದ್ಯ ಸಂತ್ರಸ್ತೆ ಬಾಲಕಿಯನ್ನು ಮಾನ್ವಿ ತಾಲೂಕು ಆಸ್ಪತ್ರೆಯಿಂದ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.

ನಡೆದಿದ್ದೇನು?

ಶಾಲೆಯಿಂದ ಮನೆಗೆ ಕರೆದೊಯ್ಯುವ ನೆಪಮಾಡಿ ಆರೋಪಿ ಶಿವನಗೌಡ ಬಾಲಕಿಯನ್ನು ಶಾಲೆಯಿಂದ ಕರೆದುಕೊಂಡು ಹೋಗಿದ್ದ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಪೋಷಕರ ಅನುಮತಿಯಿಲ್ಲದೆ ಅಪರಿಚಿತರೊಂದಿಗೆ ಮಗುವನ್ನು ಕಳುಹಿಸಿದ ಶಾಲಾ ಸಿಬ್ಬಂದಿ ವಿರುದ್ಧ ಸಂತ್ರಸ್ತೆ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅತ್ಯಾಚಾರ ಎಸಗಿದಾತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಬೇರೆ ಯಾವ ಮಕ್ಕಳಿಗೂ ಇಂತಹ ಪರಿಸ್ಥಿತಿ ಬರಬಾರದು ಎಂದು ಪೋಷಕರು ಆಗ್ರಹಿಸಿದ್ದಾರೆ.

ಬಾಲಕಿಯ ತಂದೆ-ತಾಯಿ ಕರೆತರಲು ಹೇಳಿದ್ದಾರೆಂದು ಕೃತ್ಯ

ಬಾಲಕಿಯ ತಂದೆ-ತಾಯಿ ಆಕೆಯನ್ನು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ಆರೋಪಿ ಶಾಲಾ ಸಿಬ್ಬಂದಿ ಬಳಿ ಹೇಳಿದ್ದಾನೆ. ಅಷ್ಟೇ ಅಲ್ಲದೆ, ‘‘ಅಮ್ಮ ಅಪ್ಪನ ಬಳಿ ಕರೆದುಕೊಂಡು ಹೋಗುತ್ತೇನೆ ಬಾ’’ ಎಂದು ಮಗಳನ್ನು ಬಸ್ಸು ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ಇಷ್ಟು ಚಿಕ್ಕ ಬಾಲಕಿಯ ಮೇಲೆಯೇ ಇಂಥ ಕೃತ್ಯ ಎಸಗಿದವನು ಮುಂದೆ ಬೇರೆ ಹುಡುಗಿಯರು, ಯುವತಿರ ಮೇಲೆಯೂ ಅತ್ಯಾಚಾರ ಎಸಗಲಾರ ಎಂಬುದಕ್ಕೆ ಏನು ಖಾತರಿ ಇದೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Share This Article