ಕಾಶ್ಮೀರದ ಹಲವು ಸಮಸ್ಯೆಗಳಿಗೆ ಭಾರತ ಜೊತೆ ಮಾತುಕತೆಯೇ ಪರಿಹಾರ: ಪಾಕ್‌ ಪ್ರಧಾನಿ ಷರೀಫ್‌

Ravi Talawar
ಕಾಶ್ಮೀರದ ಹಲವು ಸಮಸ್ಯೆಗಳಿಗೆ ಭಾರತ ಜೊತೆ ಮಾತುಕತೆಯೇ ಪರಿಹಾರ: ಪಾಕ್‌ ಪ್ರಧಾನಿ ಷರೀಫ್‌
WhatsApp Group Join Now
Telegram Group Join Now

ಇಸ್ಲಮಾಬಾದ್: ಕಾಶ್ಮೀರ ಸೇರಿದಂತೆ ಭಾರತದೊಂದಿಗಿನ ಎಲ್ಲಾ ಸಮಸ್ಯೆಗಳನ್ನು ಪಾಕಿಸ್ತಾನ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಬಯಸುತ್ತದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಹೇಳಿದ್ದಾರೆ.

“ಕಾಶ್ಮೀರ ಒಗ್ಗಟ್ಟಿನ ದಿನ”ದಂದು ಮುಜಫರಾಬಾದ್‌ನಲ್ಲಿ ನಡೆದ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಶಾಸಕಾಂಗ ಸಭೆಯ ವಿಶೇಷ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಶೆಹಬಾಜ್ ಷರೀಫ್, ಭಾರತವು ವಿಶ್ವಸಂಸ್ಥೆಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು ಮತ್ತು ಈ ನಿಟ್ಟಿನಲ್ಲಿ ಮಾತುಕತೆಯನ್ನು ಪ್ರಾರಂಭಿಸಬೇಕು ಎಂದು ಹೇಳಿದ್ದಾರೆ.

“ಭಾರತವು ಆಗಸ್ಟ್ 5, 2019ರ ಚಿಂತನೆಯಿಂದ ಹೊರಬಂದು ವಿಶ್ವಸಂಸ್ಥೆಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು ಮತ್ತು ಈ ನಿಟ್ಟಿನಲ್ಲಿ ಮಾತುಕತೆ ಪ್ರಾರಂಭಿಸಬೇಕು” ಎಂದು ಪಾಕಿಸ್ತಾನದ ಪ್ರಧಾನಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಹಾಗೇ, ಭಯೋತ್ಪಾದನೆ, ಹಗೆತನ ಮತ್ತು ಹಿಂಸಾಚಾರವಿಲ್ಲದ ವಾತಾವರಣದಲ್ಲಿ ಪಾಕಿಸ್ತಾನದೊಂದಿಗೆ ಸಾಮಾನ್ಯ ನೆರೆಯ ದೇಶದ ಸಂಬಂಧವನ್ನು ಹೊಂದಲು ಬಯಸುವುದಾಗಿ ಭಾರತವು ಪದೇ ಪದೇ ಪ್ರತಿಪಾದಿಸಿದೆ.

WhatsApp Group Join Now
Telegram Group Join Now
Share This Article