ಬೆಂಗಳೂರು: ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವ ವಿಕ್ಸಿತ್ ಭಾರತ್ ಆಶಯಕ್ಕೆ ಪೂರಕವಾದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿದರು.
₹ 12ಲಕ್ಷ ವಾರ್ಷಿಕ ಆದಾಯ ಇರುವವರು ಯಾವುದೇ ತೆರಿಗೆ ಕಟ್ಟಬೇಕಿರದ ಯೋಜನೆಯನ್ನು ಅವರು ಜಾರಿಗೆ ತಂದಿರೋದು ಶ್ಲಾಘನೀಯ. ಅವರು ಮಂಡಿಸಿರುವ ಬಜೆಟ್ ಬಡವರು, ರೈತರು, ಯುವಕರು ಮತ್ತು ಮಹಿಳೆಯರಿಗೆ ಬಹಳ ಅನುಕೂಲವಾಗಲಿದೆ ಎಂದು ವಿಜಯೇಂದ್ರ ಹೇಳಿದರು.
ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ನೀಡಿದ ಪ್ರತಿಕ್ರಿಯೆ ಗಮನಿಸಿದೆ, ಅವರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದರು.