27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನ

Ravi Talawar
27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನ
WhatsApp Group Join Now
Telegram Group Join Now

ನವದೆಹಲಿ: 27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು. ಆಮ್ ಆದ್ಮಿ ಪಕ್ಷದ ನಾಯಕರ ಪೈಕಿ ಸಿಎಂ ಅತಿಶಿ ಒಬ್ಬರೇ ಗೆಲುವು ಸಾಧಿಸುವ ಮೂಲಕ ಪಕ್ಷದ ಮರ್ಯಾದೆ ಉಳಿಸಿದ ನಾಯಕಿ. ಈಗಾಗಲೇ ಹಲವಾರು ಸುತ್ತಿನ ಎಣಿಕೆ ಮುಗಿದಿದ್ದು, ಬಿಜೆಪಿ 2 ಸ್ಥಾನಗಳನ್ನು ಗೆದ್ದಿದೆ ಮತ್ತು 70 ಸ್ಥಾನಗಳ ಪೈಕಿ 45 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 2020ರ ವಿಧಾನಸಭಾ ಚುನಾವಣೆಯಲ್ಲಿ ಒಂದಂಕಿ ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ ಭರ್ಜರಿ ಯಶಸ್ಸಿನ ಮೂಲಕ ಪುನರಾಗಮನ ಮಾಡಿದೆ.

ಕಳೆದ 2 ವಿಧಾನಸಭಾ ಚುನಾವಣೆಗಳಲ್ಲಿ ಬಹುತೇಕ ಭರ್ಜರಿ ಗೆಲುವು ಸಾಧಿಸಿದ್ದ ಎಎಪಿ 2 ಸ್ಥಾನಗಳಲ್ಲಿ ಜಯ ಸಾಧಿಸಿದ್ದರೂ 21 ಸ್ಥಾನಗಳಲ್ಲಿ ಹಿಂದುಳಿದಿದೆ. ಒಂದೇ ಒಂದು ಸ್ಥಾನದಲ್ಲಿಯೂ ಮುನ್ನಡೆ ಸಾಧಿಸುವಲ್ಲಿ ವಿಫಲವಾದ ಕಾಂಗ್ರೆಸ್ ಸತತ ಮೂರನೇ ಬಾರಿಗೆ ಶೂನ್ಯ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸುವ ಲಕ್ಷಣಗಳು ಕಾಣುತ್ತಿವೆ.

WhatsApp Group Join Now
Telegram Group Join Now
Share This Article