ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ

Ravi Talawar
ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ
WhatsApp Group Join Now
Telegram Group Join Now

ಇಂಫಾಲ್, ಫೆಬ್ರುವರಿ 9: ಮಣಿಪುರ ರಾಜ್ಯದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಇಂದು ಭಾನುವಾರ ರಾಜೀನಾಮೆ ನೀಡಿದ್ದಾರೆ. ಮಣಿಪುರ ರಾಜಧಾನಿ ಇಂಫಾಲದ ರಾಜಭವನದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲ ಅವರಿಗೆ ಬಿರೇನ್ ಸಿಂಗ್ ರಾಜೀನಾಮೆ ಪತ್ರ ಸಲ್ಲಿಸಿರುವುದು ತಿಳಿದುಬಂದಿದೆ.

ಮಣಿಪುರ ರಾಜ್ಯ ಎರಡು ವರ್ಷದಿಂದ ಜನಾಂಗೀಯ ಕಲಹ ಹಾಗೂ ಹಿಂಸಾಚಾರದಿಂದ ನಲುಗುತ್ತಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲರಾಗಿದ್ದಕ್ಕೆ ರಾಜೀನಾಮೆ ನೀಡಿದ್ದಾರೋ ಎಂಬುದು ಗೊತ್ತಾಗಿಲ್ಲ. ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಳ್ವಿಕೆ ಇದೆ.

‘ಇಷ್ಟರವರೆಗೆ ಮಣಿಪುರ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದ್ದು ನನಗೊಂದು ಗೌರವ ಎನಿಸಿದೆ. ಮಣಿಪುರದ ಪ್ರತಿಯೊಬ್ಬ ವ್ಯಕ್ತಿಯ ಸುರಕ್ಷತೆಗೆ ಮತ್ತು ರಾಜ್ಯದ ಅಭಿವೃದ್ದಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲು ನೆರವು ನೀಡಿದ ಕೇಂದ್ರ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈ ಬೆಂಬಲವನ್ನು ಹೀಗೇ ಮುಂದುವರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಮೂಲಕ ಕೇಳಿಕೊಳ್ಳುತ್ತೇನೆ’ ಎಂದು ರಾಜ್ಯಪಾಲರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಸಿಎಂ ಬಿರೇನ್ ಸಿಂಗ್ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article