ಉತ್ತರದಲ್ಲಿ ಮಹಾಕುಂಭ, ಬೆಂಗಳೂರಿನಲ್ಲಿ ಯುದ್ಧ ವಿಮಾನಗಳ ಮಹಾಕುಂಭ: ರಾಜನಾಥ್‌ ಸಿಂಗ್‌

Ravi Talawar
ಉತ್ತರದಲ್ಲಿ ಮಹಾಕುಂಭ, ಬೆಂಗಳೂರಿನಲ್ಲಿ ಯುದ್ಧ ವಿಮಾನಗಳ ಮಹಾಕುಂಭ: ರಾಜನಾಥ್‌ ಸಿಂಗ್‌
WhatsApp Group Join Now
Telegram Group Join Now

ಬೆಂಗಳೂರು, ಫೆಬ್ರವರಿ 10: ಉತ್ತರ ಪ್ರದೇಶದಲ್ಲಿ ಸಂಸ್ಕೃತಿಯ ಮಹಾ ಕುಂಭಮೇಳ ನಡೆಯುತ್ತಿದೆ. ಇಲ್ಲಿ ಬೆಂಗಳೂರಿನಲ್ಲಿ ತಂತ್ರಜ್ಞಾನ ಹಾಗೂ ಯುದ್ಧೋಪಕರಣಗಳ, ಯುದ್ಧ ವಿಮಾನಗಳ ಮಹಾ ಕುಂಭ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಯಲಹಂಕ ವಾಯುನೆಲೆಯಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಏರೋ ಇಂಡಿಯಾ 2025ರ ವೈಮಾನಿಕ ಪ್ರದರ್ಶನದ ಉದ್ಘಾಟನೆ ನೆರವೇರಿಸಿ ಸೋಮವಾರ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. 10 ವರ್ಷಗಳಿಂದ ವೈಮಾನಿಕ‌ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ. ಬಜೆಟ್​ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 1,080 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಅವರು ತಿಳಿಸಿದರು.

WhatsApp Group Join Now
Telegram Group Join Now
Share This Article