ಕಾಶಿಯಲ್ಲಿ ನದಿಯಲ್ಲಿ ಮುಳುಗಿ ಬಾಗಲಕೋಟೆ ವ್ಯಕ್ತಿ ಸಾವು

Ravi Talawar
ಕಾಶಿಯಲ್ಲಿ ನದಿಯಲ್ಲಿ ಮುಳುಗಿ ಬಾಗಲಕೋಟೆ ವ್ಯಕ್ತಿ ಸಾವು
WhatsApp Group Join Now
Telegram Group Join Now

ಬಾಗಲಕೋಟೆ, ಫೆಬ್ರವರಿ 09: ಕಾಶಿಯಲ್ಲಿ ಸ್ನಾನ ಮಾಡುವ ವೇಳೆ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವನ್ನಪ್ಪಿರುವಂತಹ  ಘಟನೆ ನಡೆದಿದೆ. ಸತೀಶ್ ಜೋಶಿ (44) ಮೃತ ವ್ಯಕ್ತಿ. ಒಂದು ವಾರದ ಹಿಂದೆ ಕುಂಭಮೇಳದಲ್ಲಿ ಭಾಗಿಯಾಗಿದ್ದ ಸತೀಶ್, ಬಳಿಕ ಕಾಶಿಗೆ ತೆರಳಿದ್ದರು. ಬಾಗಲಕೋಟೆ ಜಿಲ್ಲಾ ಪಂಚಾಯತ್​ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಮೃತ ಸತೀಶ್​ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

WhatsApp Group Join Now
Telegram Group Join Now
Share This Article