ಬಿಜೆಪಿ ಬಂಡಾಯ ಮತ್ತೊಮ್ಮೆ ದೆಹಲಿಗೆ ಸ್ಥಳಾಂತರ

Ravi Talawar
ಬಿಜೆಪಿ ಬಂಡಾಯ ಮತ್ತೊಮ್ಮೆ ದೆಹಲಿಗೆ ಸ್ಥಳಾಂತರ
WhatsApp Group Join Now
Telegram Group Join Now

ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಬಿಜೆಪಿ ಅಂತಃಕಲಹ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯಾಧ್ಯಕ್ಷ ಪಟ್ಟದಿಂದ ವಿಜಯೇಂದ್ರರನ್ನು ಕೆಳಕ್ಕಿಳಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದ ನಾಯಕರ ಗುಂಪು ಶತಪ್ರಯತ್ನ ಮಾಡುತ್ತಿದೆ. ಆದರೆ, ಇದಕ್ಕೆ ಕೌಂಟರ್‌ ಕೊಡುತ್ತಿರುವ ವಿಜಯೇಂದ್ರ, ನಾನಾ ವ್ಯೂಹ ಹೆಣೆಯುತ್ತಿದ್ದಾರೆ. ಇದೇ ಹೊತ್ತಲ್ಲೇ ವಿಜಯೇಂದ್ರ ಮತ್ತು ಯತ್ನಾಳ್‌ ಇಬ್ಬರೂ ಕೇಂದ್ರ ಸಚಿವ ಸೋಮಣ್ಣ ಮನೆ ಪೂಜೆ ನೆಪದಲ್ಲಿ ದೆಹಲಿಯಲ್ಲಿ ತಂತ್ರಗಾರಿಕೆ ಮಾಡುತ್ತಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಯತ್ನಾಳ್ ಬಣದ ಮೀಟಿಂಗ್: ಯತ್ನಾಳ್‌ ಬಣ ದೆಹಲಿಯಿಂದ ವಾಪಸ್‌ ಆಗಿ ವಾರವೂ ಆಗಿಲ್ಲ. ದಾವಣಗೆರೆಯ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಗೆಸ್ಟ್‌ ಹೌಸ್‌ನಲ್ಲಿ ಯತ್ನಾಳ್‌ ಬಣದ ನಾಯಕರು ಭಾನುವಾರ ಸಭೆ ಸೇರಿದ್ದಾರೆ. ಮುಂದಿನ ಹೋರಾಟಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂಸದ ಬಸವರಾಜ್‌ ಬೊಮ್ಮಾಯಿ ಜೊತೆಗೆ ವಾಲ್ಮೀಕಿ ಜಾತ್ರೆಯ ವೇದಿಕೆ ಹಂಚಿಕೊಂಡಿದ್ದಾರೆ. ಬೊಮ್ಮಾಯಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ತಟಸ್ಥ ಬಣವೂ ಪರಿವರ್ತನೆಯಾಗಿದೆ ಎಂದಿದ್ದಾರೆ.
WhatsApp Group Join Now
Telegram Group Join Now
Share This Article