ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಎಚ್‌ಎಂ ರೇವಣ್ಣ

Ravi Talawar
ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಎಚ್‌ಎಂ ರೇವಣ್ಣ
WhatsApp Group Join Now
Telegram Group Join Now

ಉಡುಪಿ: ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್‌ಎಂ ರೇವಣ್ಣ ಅವರು ಮಂಗಳವಾರ ಹೇಳಿದರು.

ಮಂಗಳವಾರ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

4 ಲಕ್ಷ ಕೋಟಿ ರೂ. ಬಜೆಟ್ ಹೊಂದಿರುವ ಕರ್ನಾಟಕದಂತಹ ರಾಜ್ಯಕ್ಕೆ, ಐದು ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ.ಗಳನ್ನು ಕಾಯ್ದಿರಿಸುವುದು ದೊಡ್ಡ ವಿಷಯವಲ್ಲ ಎಂದು ಹೇಳಿದರು. ಈ ಮೂಲಕ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂಬ ವದಂತಿಗಳನ್ನು ತಳ್ಳಿಹಾಕಿದರು.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ಎಲ್ಲಾ ವದಂತಿಗಳು ಸುಳ್ಳು. ಕರ್ನಾಟಕದ ಗ್ಯಾರಂಟಿ ಯೋಜನೆಯಿಂದ ಪ್ರೇರಿತರಾದ ಬಿಜೆಪಿಯವರು ಅವರ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯವರು ಕಾಂಗ್ರೆಸ್‌ ಯೋಜನೆಗಳನ್ನು ವಿರೋಧಿಸಿದಂತೆ ನಾವು ವಿರೋಧಿಸುವುದಿಲ್ಲ ಎಂದು ಹೇಳಿದರು.

ಅನರ್ಹವಾದ ರೇಷನ್‌ ಕಾರ್ಡ್‌ಗಳನ್ನು ರದ್ದುಪಡಿಸುವಂತೆ ಕೇಂದ್ರ ಸರಕಾರ ಸೂಚನೆ ಹೊರಡಿಸಿದ ಪರಿಣಾಮ ರಾಜ್ಯ ಸರಕಾರ ಅದನ್ನು ಅನುಷ್ಠಾನಕ್ಕೆ ತಂದಿದೆ. ಈ ಕಾರಣಕ್ಕೆ ಹೊಸ ರೇಷನ್‌ ಕಾರ್ಡ್‌ಗಳ ನೋಂದಣಿಯೂ ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article