ಮಡಿಕೇರಿ, ಫೆಬ್ರವರಿ 20: ಕೊಡಗು ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನವರು ಗರ್ಭಿಣಿಯರಾಗುತ್ತಿರುವ ಸಂಖ್ಯೆ ಹೆಚ್ಚಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಳೆದ 9 ತಿಂಗಳುಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ.
ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ 59 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಅಪ್ರಾಪ್ತರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ಬೆಳಕಿಗೆ ಬರುವಂತೆ ಮಾಡಿದೆ. 30 ಅಪ್ರಾಪ್ತೆಯರ ಪೈಕಿ ಈಗಾಗಲೇ 14 ಬಾಲಕಿಯರಿಗೆ ಹೆರಿಗೆ ಆಗಿದೆ. ಮತ್ತೊಬ್ಬಳು ಬಾಲಕಿಗೆ ಗರ್ಭಪಾತ ಆಗಿರುವುದು ಗೊತ್ತಾಗಿದೆ.
ರಾಜಪೇಟೆ, ಪೊನ್ನಂಪೇಟೆಯಲ್ಲಿ ಹೆಚ್ಚು ಅಪ್ರಾಪ್ತ ಗರ್ಭಿಣಿಯರು ಪತ್ತೆಯಾಗಿದ್ದಾರೆ. ಅದರಲ್ಲಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದಲ್ಲೇ 43 ಸಂತ್ರಸ್ತೆಯರು ಪತ್ತೆಯಾಗಿದ್ದಾರೆ. ಈ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಗೊತ್ತಾಗಿದೆ.