ನವದೆಹಲಿ, ಫೆಬ್ರವರಿ 20: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಆರು ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಪ್ರವೇಶ್ ವರ್ಮಾ, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದ್ರ ಇಂದ್ರರಾಜ್, ಕಪಿಲ್ ಮಿಶ್ರಾ, ಆಶಿಶ್ ಸೂದ್ ಮತ್ತು ಪಂಕಜ್ ಸಿಂಗ್ ಅವರ ಹೆಸರುಗಳು ಸೇರಿವೆ. ಪ್ರವೇಶ್ ವರ್ಮಾ ಅವರು ನವದೆಹಲಿ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದಾರೆ.
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ
