ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ ಕಾರು ಅಪಘಾತ; ಅದೃಷ್ಟವಶಾತ್‌ ಗಂಗೂಲಿ ಸೇಫ್‌

Ravi Talawar
ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ ಕಾರು ಅಪಘಾತ; ಅದೃಷ್ಟವಶಾತ್‌ ಗಂಗೂಲಿ ಸೇಫ್‌
WhatsApp Group Join Now
Telegram Group Join Now

ಕೋಲ್ಕತ್ತಾ, ಫೆಬ್ರವರಿ 21: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ

ಸೌರವ್ ಈ ಭೀಕರ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಬೆಂಗಾವಲು ಪಡೆಯಲ್ಲಿದ್ದ ವಾಹನಗಳಿಗೆ ಹಾನಿಯಾಗಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲಿ ಕಾದ ನಂತರ ಗಂಗೂಲಿ ಬೇರೆ ವಾಹನದಲ್ಲಿ ಸಮಾರಂಭಕ್ಕೆ ತೆರಳಿದ್ದಾರೆ.ʼ

ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಗಂಗೂಲಿ ಅವರಿಗಾಗಲಿ, ಅವರ ಬೆಂಗಾವಲು ಪಡೆಯಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಆದಾಗ್ಯೂ, ಬೆಂಗಾವಲು ಪಡೆಯಲ್ಲಿದ್ದ ಎರಡು ವಾಹನಗಳು ಜಖಂಗೊಂಡವು. ಅಪಘಾತದ ನಂತರ, ಸೌರವ್ ಗಂಗೂಲಿ ಸುಮಾರು 10 ನಿಮಿಷಗಳ ಕಾಲ ಸ್ಥಳದಲ್ಲೇ ಇದ್ದರು. ನಂತರ ಅವರು ಬರ್ಧಮಾನ್ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು.

WhatsApp Group Join Now
Telegram Group Join Now
Share This Article