ಅಹಮದಾಬಾದ್ (ಮಾರ್ಚ್5): ಗುಜರಾತ್ನ ಗಿರ್ನಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಹಿಸಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಸಂರಕ್ಷಣಾ ಪ್ರಯತ್ನಗಳನ್ನು ಸುಧಾರಿಸಲು ಹಲವು ಮಹತ್ವದ ನಿರ್ಧಾರಗಳು ಮತ್ತು ಸಂಶೋಧನೆಗಳನ್ನು ಘೋಷಿಸಿದರು. ವಿಶ್ವ ವನ್ಯಜೀವಿ ದಿನದಂದು ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಿ ಮೋದಿ, ಮೇ ತಿಂಗಳಲ್ಲಿ 16ನೇ ಏಷ್ಯಾಟಿಕ್ ಸಿಂಹಗಳ ಜನಸಂಖ್ಯಾ ಗಣತಿ ನಡೆಸಲಾಗುವುದು ಎಂದು ಘೋಷಿಸಿದ್ದಾರೆ.
ವಿಶ್ವ ವನ್ಯಜೀವಿ ದಿನಾಚರಣೆಯೊಂದಿಗೆ ಸೋಮವಾರ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (NBWL) ಏಳನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ 16ನೇ ಏಷ್ಯಾಟಿಕ್ ಸಿಂಹಗಳ ಜನಸಂಖ್ಯಾ ಗಣತಿನು ನಡೆಸಲಾಗುವುದು ಎಂದು ಘೋಷಿಸಿದ್ದಾರೆ.ಇದೇ ವೇಳೆ ಪ್ರಧಾನಿ ಮೋದಿ ಜುನಾಗಢದಲ್ಲಿ ರಾಷ್ಟ್ರೀಯ ಉಲ್ಲೇಖ ಕೇಂದ್ರ-ವನ್ಯಜೀವಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಹಾಗೇ, ಮೊದಲ ಬಾರಿಗೆ ನದಿ ಡಾಲ್ಫಿನ್ಗಳ ಕುರಿತು ಪುಸ್ತಕವನ್ನು ಬಿಡುಗಡೆಗೊಳಿಸಿದರು. ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗಾಗಿ ಶ್ರೇಷ್ಠತೆಯ ಕೇಂದ್ರ, SACON ಸ್ಥಾಪನೆಯನ್ನು ಕೂಡ ಮೋದಿ ಘೋಷಿಸಿದರು.