ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಾಳೆ ಬೆಂಗಳೂರಿಗೆ

Ravi Talawar
ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಾಳೆ ಬೆಂಗಳೂರಿಗೆ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 6: ಕೇಂದ್ರ ಗೃಹ ಸಚಿವ ಅಮಿತ್ ಶಾ  ಶುಕ್ರವಾರ ಬೆಂಗಳೂರಿಗೆ  ಆಗಮಿಸಲಿದ್ದಾರೆ. ಮಾರತ್ತ​​ಹಳ್ಳಿಯಲ್ಲಿ ನಡೆಯಲಿರುವ ‘‘ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ , ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌ , ಮಾಜಿ ಸಚಿವ ಅರವಿಂದ ಲಿಂಬಾವಳಿ ಕೂಡ ವೇದಿಕೆ ಹಂಚಿಕೊಳ್ಳಲಿದ್ದಾರೆ. ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.

ಆದರೆ, ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ರಾಜ್ಯ ಬಿಜೆಪಿ ಬೆಳವಣಿಗೆಗಳ ಕುರಿತು ಕರ್ನಾಟಕದ ನಾಯಕರ ಯಾವುದೇ ಭೇಟಿ ನಿಗದಿಯಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾಗಲು ಬಿಜೆಪಿ ನಾಯಕ ಶ್ರೀರಾಮುಲು ಪ್ಲಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾ ಅವರನ್ನು ಭೇಟಿಯಾಗಿ ತಮಗೆ ಪಕ್ಷದಲ್ಲಾಗಿರುವ ಅವಮಾನದ ಬಗ್ಗೆ ವಿವರಣೆ ನೀಡಲು ಶ್ರೀರಾಮುಲು‌ ಸಿದ್ಧವಾಗಿದ್ದಾರೆ. ಈಗಾಗಲೇ ಅಮಿತ್ ಶಾ ತಂಡದ ಜೊತೆಗೆ ಸಂಪರ್ಕದಲ್ಲಿರುವ ರಾಮುಲು ರಾಜ್ಯ ನಾಯಕರ ಜೊತೆಗೆ ಅಲ್ಲದೆ, ಪ್ರತ್ಯೇಕವಾಗಿ ಭೇಟಿಯಾಗಲು ಉದ್ದೇಶಿಸಿದ್ದಾರೆ.

WhatsApp Group Join Now
Telegram Group Join Now
Share This Article