ಮಾರ್ಚ್​ 9 ರಂದು ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರ ಬಂದ್‌

Ravi Talawar
ಮಾರ್ಚ್​ 9 ರಂದು ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರ ಬಂದ್‌
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್​ 08: ಕರ್ನಾಟಕ ರಾಜ್ಯ ಪೊಲೀಸ್  ಇಲಾಖೆಯ ವತಿಯಿಂದ 2ನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ಪೊಲೀಸ್ ರನ್  ಕಾರ್ಯಕ್ರಮವನ್ನು ಭಾನುವಾರ (ಮಾ.09) ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

  1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ.ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್‌ ಕಾರ್ನರ್ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಬೆಳಗ್ಗೆ 06:00 ರಿಂದ 10:00 ಗಂಟೆಯವರೆಗೆ ಅವಕಾಶವಿರುವುದಿಲ್ಲ.
  2. ಬಾಳೇಕುಂದ್ರಿ ವೃತ್ತ ಮತ್ತು ಸಿಟಿಒ ಜಂಕ್ಷನ್‌ನಿಂದ ವಿಧಾನಸೌಧ ಕಡೆಗೆ ಹೋಗುವ ವಾಹನಗಳನ್ನು ಪೊಲೀಸ್ ತಿಮ್ಮಯ್ಯ ಜಂಕ್ಷನ್‌ನಲ್ಲಿ ರಾಜಭವನದ ಕಡೆಗೆ ಹಾಗೂ ಕನ್ನಿಂಗ್ ಹ್ಯಾಮ್ ರಸ್ತೆ ಕಡೆಗೆ ಕಳುಹಿಸಲಾಗುವುದು. ವಿಧಾನಸೌಧ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಬೆಳಗ್ಗೆ 06:00 ರಿಂದ 10:00 ಗಂಟೆಯವರೆಗೆ ಅವಕಾಶವಿರುವುದಿಲ್ಲ.
  3. ಹಳೆ ಮದ್ರಾಸ್ ರಸ್ತೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯ ಕಡೆಗೆ ಹೋಗುವ ವಾಹನಗಳನ್ನು ಪಡ್ಲನ್ ಜಂಕ್ಷನ್‌ನಿಂದ ದೇವಾಂಗ ರಸ್ತೆ, ಶಾಂತಿನಗರ ಮತ್ತು ರಿಚ್ಮಂಡ್​ ವೃತ್ತಕ್ಕೆ ಕಳುಹಿಸಲಾಗುವುದು.
WhatsApp Group Join Now
Telegram Group Join Now
Share This Article