ಬೆಂಗಳೂರು, ಮಾರ್ಚ್ 08: ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಏರುತ್ತಿದ್ದಂತೆ ಮಳೆ(Rain)ಯ ಮುನ್ಸೂಚನೆಯೂ ಸಿಕ್ಕಿದೆ. ಮಾರ್ಚ್ 12ರಿಂದ ಮೂರು ದಿನಗಳ ಕಾಲ ಕರ್ನಾಟಕದ 14ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ಹೊನ್ನಾವರ, ಕಾರವಾರ, ಹಾಸನ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಬೀದರ್ ಹಾಗೂ ಕೊಪ್ಪಳದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇತ್ತು. ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.