ಗದ್ದಲ ಮಧ್ಯೆ ಗ್ರೇಟರ್‌ ಬೆಂಗಳೂರು ವಿಧೇಯಕ ಅಂಗೀಕಾರ

Ravi Talawar
ಗದ್ದಲ ಮಧ್ಯೆ ಗ್ರೇಟರ್‌ ಬೆಂಗಳೂರು ವಿಧೇಯಕ ಅಂಗೀಕಾರ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್​ 10: ವಿಧಾನಸಭಾ ಅಧಿವೇಶನದಲ್ಲಿ (Assembly session) ಇಂದು ಗ್ರೇಟರ್ ಬೆಂಗಳೂರು ವಿಧೇಯಕ ಬಗ್ಗೆ ಬಿಸಿ ಬಿಸಿ ಚರ್ಚೆ ಮಾಡಲಾಯಿತು. ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್​ ವಿಧೇಯಕ ಮಂಡನೆಗೆ ವಿರೋಧ ವ್ಯಕ್ತಡಿಸಿದರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನ (BBMP) ವಿಭಾಗಿಸಿ ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿರುವ ಸರ್ಕಾರ, ಜಟಾಪಟಿ ನಡುವೆ ವಿಧೇಯಕಕ್ಕೆ ಅಂಗೀಕಾರ ಪಡೆದಿದೆ. ಈ ವೇಳೆ ಧಿಕ್ಕಾರ ಕೂಗುತ್ತಾ ವಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು. ಆದರೆ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ್​ ಮಾತ್ರ ಸಭಾತ್ಯಾಗ ಮಾಡಿಲಿಲ್ಲ.

WhatsApp Group Join Now
Telegram Group Join Now
Share This Article