ರನ್ಯಾ ರಾವ್ ಕೇಸ್​ನಲ್ಲಿ ಸಿಐಡಿ ತನಿಖೆ ಹಿಂಪಡೆದ ಬಗ್ಗೆ ಪರಮೇಶ್ವರ್ ಸ್ಪಷ್ಟನೆ

Ravi Talawar
ರನ್ಯಾ ರಾವ್ ಕೇಸ್​ನಲ್ಲಿ ಸಿಐಡಿ ತನಿಖೆ ಹಿಂಪಡೆದ ಬಗ್ಗೆ ಪರಮೇಶ್ವರ್ ಸ್ಪಷ್ಟನೆ
WhatsApp Group Join Now
Telegram Group Join Now

ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದಾರೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಚಿನ್ನವನ್ನು ದುಬೈನಿಂದ ಬೆಂಗಳೂರಿಗೆ ತರುವಾಗ ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆ ಹಿಡಿಯಲಾಗಿದೆ. ರನ್ಯಾ ಅವರ ಪ್ರಕರಣದಲ್ಲಿ ಪೊಲೀಸ್ ಪ್ರೊಟೋಕಾಲ್ ಉಲ್ಲಂಘನೆ ಆಗಿದೆ ಎಂದು ವರದಿ ಆಗಿತ್ತು. ಈ ಸಂಬಂಧ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು. ಇದನ್ನು 24 ಗಂಟೆಯಲ್ಲಿ ಹಿಂಪಡೆಯಲಾಗಿದೆ. ಈ ಬಗ್ಗೆ ರಾಜ್ಯ ಗೃಹಸಚಿವ ಜಿ. ಪರಮೇಶ್ವರ್ ಅವರು ಮಾತನಾಡಿದ್ದಾರೆ. ಈ ಮೂಲಕ ಹಬ್ಬಿದ ವಂದತಿಗಳಿಗೆ ತೆರೆ ಎಳೆದಿದ್ದಾರೆ.

ಈ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿ ಇದ್ದಾರೆ ಎಂಬ ಮಾತುಗಳು ಕೇಳಿ ಬಂದವು. ಈ ಕಾರಣದಿಂದಲೇ ಸರ್ಕಾರದ ಮೇಲೆ ಒತ್ತಡ ಹೇರಲಾಯಿತು ಮತ್ತು ಸರ್ಕಾರ ಸಿಐಡಿ ತನಿಖೆ ಆದೇಶವನ್ನು ಹಿಂದಕ್ಕೆ ಪಡೆಯಿತು ಎನ್ನುವ ಮಾತು ಕೇಳಿ ಬಂದಿದ್ದವು. ಈ ಬಗ್ಗೆಯೂ ಪರಮೇಶ್ವರ್ ಮಾತನಾಡಿದ್ದಾರೆ. ‘ತನಿಖೆಗೆ ಆದೇಶ ನೀಡಲೂ ಯಾರು ಒತ್ತಡ ಹೇರಿರಲಿಲ್ಲ. ಹಿಂದಕ್ಕೆ ಪಡೆಯಲೂ ಯಾರೂ ಒತ್ತಡ ಹೇರಿಲ್ಲ. ಎರಡು ತನಿಖೆ ಬೇಡ ಎಂಬ ಕಾರಣಕ್ಕೆ ನಾವು ಹಿಂಪಡೆದಿದ್ದೇವೆ ಅಷ್ಟೇ. ಇಲ್ಲಿ ಯಾವುದೇ ಗೊಂದಲ ಬೇಡ’ ಎಂದು ಪರಮೇಶ್ವರ್ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article