ಉಪ ಸ್ಪೀಕರ್​ ರುದ್ರಪ್ಪ ಲಮಾಣಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್

Ravi Talawar
ಉಪ ಸ್ಪೀಕರ್​ ರುದ್ರಪ್ಪ ಲಮಾಣಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್
WhatsApp Group Join Now
Telegram Group Join Now

ದಾವಣಗೆರೆ: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಉಪ ಸ್ಪೀಕರ್​ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ನಿನ್ನೆ ಬಜೆಟ್​​ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿತ್ತು.

ಕೂಡಲೇ ಅವರನ್ನು ದಾವಣಗೆರೆಯ S.S.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ, ಇದೀಗ ಏಕಾಏಕಿ ರುದ್ರಪ್ಪ ಲಮಾಣಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿಕ ಕಾರನ್ನು ಸೈಡಿಗೆ ಹಾಕಿ ಇಳಿದಿದ್ದಾರೆ. ಅದೇ ವೇಳೆ ವೇಗವಾಗಿ ಬಂದ ಬೈಕ್​ವೊಂದು ರುದ್ರಪ್ಪ ಲಮಾಣಿ ಅವರಿಗೆ ಗುದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಹಣೆ, ಹಲ್ಲು, ಗದ್ದ ಮತ್ತು ಬಲ ಮೊಣಕಾಲಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ದಾವಣಗೆರೆಯ ಎಸ್​ಎಸ್​ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

WhatsApp Group Join Now
Telegram Group Join Now
Share This Article