ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾಜಿ ಸಚಿವ ಹೆಚ್ಎಂ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ.
ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಸೋಮವಾರ (ಮಾರ್ಚ್.17) ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಆರೋಪಿಸಿದ್ದಾರೆ. ಈ ಸಂಬಂಧ ಹೆಚ್ಎಂ ರೇವಣ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯಧಾರಗಳನ್ನು ಓದಗಿಸುವಂತೆ ನಂದಿನಿ ಅವರಿಗೆ ನೋಟಿಸ್ ನೀಡಿದ್ದಾರೆ.