ಬೆಳಗಾವಿ.ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಭಾ.ಜ.ಪಾ ರಾಜ್ಯಾಧ್ಯಕ್ಷರಾದ ಬಿ ವಾಯ್. ವಿಜಯೇಂದ್ರ ಅವರ ಬೆಳಗಾವಿ ಜಿಲ್ಲೆಯ ಪ್ರವಾಸದ ಕೈಗೊಳ್ಳಲಿದ್ದಾರೆ.
ರವಿವಾರ 16-03-2025 ರವಿವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ 10.45 am ಗಂಟೆಗೆ ಬೆಳಗಾವಿಯ (ಸಾಂಬ್ರಾ) ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ 11.30 am ಗಂಟೆಗೆ ಬೈಲಹೊಂಗಲ ತಾಲೂಕಿನ ಮರಡಿನಾಗಲಾಪೂರ ಗ್ರಾಮದ ಹತ್ತಿರ ಇರುವ ಗದ್ದಿಕರವಿನಕೊಪ್ಪ ಕ್ರಾಸ್ ಹತ್ತಿರ ನೂತನವಾಗಿ ನಿರ್ಮಿಸಿರುವ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಮಂಟಪದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ನಂತರ ಅಲ್ಲಿಂದ ಮಧ್ಯಾಹ್ನ 2.30pm ಗಂಟೆಗೆ ಬೆಳಗಾವಿಯ (ಸಾಂಬ್ರಾ) ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.