ಸಂವಿಧಾನ ವಿರೋಧಿ ಕಾಂಗ್ರೆಸ್ ಸಂಸ್ಕೃತಿ: ಸಿದ್ದನಗೌಡರ 

Ravi Talawar
ಸಂವಿಧಾನ ವಿರೋಧಿ ಕಾಂಗ್ರೆಸ್ ಸಂಸ್ಕೃತಿ: ಸಿದ್ದನಗೌಡರ 
WhatsApp Group Join Now
Telegram Group Join Now
ಬೆಳಗಾವಿ: ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದ ನಾಯಕರು ಸದಾ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಮೂಲ ಮಂತ್ರವಾಗಿದೆ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಅಕ್ರೋಶವ್ಯಕ್ತ ಪಡಿಸಿದರು.
ಮಂಗಳವಾರ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ  ಅವರು, ಕಾಂಗ್ರೆಸ್ಸಿನ ಮನಸ್ಥಿತೆಯೆ ಸಂವಿಧಾನ ವಿರೋಧಿ ಮಾನಸಿಕತೆ ಹೊಂದಿದೆ. 370ನೇ ವಿಧಿಯನ್ನು ಡಾ. ಅಂಬೇಡ್ಕರರು ವಿರೋಧಿಸಿದ್ದರು. ನೆಹರೂ ಇದೇ ವಿಧಿಯನ್ನು ಜಾರಿಗೊಳಿಸಿದರು. ಸಂವಿಧಾನದಲ್ಲಿ ಡಾ. ಅಂಬೇಡ್ಕರರು ಸೇರಿಸಿದ್ದ ಸಮಾನ ನಾಗರಿಕ ಸಂಹಿತೆಯನ್ನು ಇವತ್ತಿನವರೆಗೂ ಅವರು ಅದನ್ನು ಅನುಷ್ಠಾನಕ್ಕೆ ತಂದಿಲ್ಲ; ಬಿಜೆಪಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಮುಂದಾದರೆ ವಿರೋಧಿಸುತ್ತಾರೆ. ಕಾಂಗ್ರೆಸ್ಸಿನ ಮಾನಸಿಕ ಸ್ಥಿತಿಯೆ  ರಾಜ್ಯ ಕಾಂಗ್ರೆಸ್  ಅಧ್ಯಕ್ಷ, ಡಿಸಿಎಮ್ ಡಿ.ಕೆ.ಶಿವಕುಮಾರರು ತಮ್ಮ  ಸಂದರ್ಶನದಲ್ಲಿ  ಮುಸ್ಲಿಂ ಧರ್ಮಾದಾರಿತ ಮೀಸಲಾತಿಗಾಗಿ  ಸಂವಿಧಾನ ಬದಲಿಸುವ ಮಾತನಾಡಿದ್ದಾರೆ.
 ಸಂವಿಧಾನದ  ಉಳಿವಿಗಾಗಿ ಕಾಂಗ್ರೆಸ್ ಹಠಾವೋ ಅಂದೋಲನ ನಡೆದಿದೆ. ಧರ್ಮಾದ ಆಧಾರಿತ ಶೇ 4 ಮೀಸಲಾತಿ  ಸಂವಿಧಾನಕ್ಕೆ ವಿರುದ್ಧವಾದುದು. ಆ ನಿಲುವನ್ನು ಯಾವಾಗ ಇವರ ಸಚಿವಸಂಪುಟ ಅನುಮೋದಿಸಿತೋ, ಕಾಂಗ್ರೆಸ್ಸಿಗೆ ಬಹುಮತ ಇದೆ ಎಂದು ಯಾವಾಗ ಅದನ್ನು ಬೆಂಬಲಿಸಿದರೋ ಆಗಲೇ ಇವರ ನಿಲುವೇನೆಂದು ಗೊತ್ತಾಗಿದೆ. ಸಂವಿಧಾನವನ್ನು ಬದಲಿಸಿ ಆದರೂ ಮತೀಯ ಆಧಾರಿತ ಮೀಸಲಾತಿ ಕೊಡುವುದೇ ಇವರ ನಿಲುವೆಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಮತಬ್ಯಾಂಕ್ ರಾಜಕಾರಣಕ್ಕೆ..ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಒಂದು ಭಾಷಣದಲ್ಲಿ ಈ ದೇಶದ ಸಂಪತ್ತನ್ನು ದೇಶದಲ್ಲಿರುವ ಬಡವರಿಗೆ ಹಂಚುತ್ತೇನೆ ಎನ್ನಲಿಲ್ಲ; ಬದಲಾಗಿ ಈ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ ಎಂದರು. ಈಗ ಮತಾಧಾರಿತ ಮೀಸಲಾತಿಯನ್ನು ಸಂವಿಧಾನ ಒಪ್ಪಿಲ್ಲ ಎಂದು ಗೊತ್ತಿದ್ದು ಕೂಡ ಸಂವಿಧಾನದ ಬಗ್ಗೆ ಬಹಳ ಜ್ಞಾನ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತಬ್ಯಾಂಕ್ ರಾಜಕಾರಣಕ್ಕೆ ಸಂವಿಧಾನದ ವಿರುದ್ಧವಾದ ಮತೀಯ ಆಧಾರಿತ ಮೀಸಲಾತಿ ತಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಹೇಳಿದ್ದನ್ನು ಬೇರೆ ಪಕ್ಷದವರು ಹೇಳಿದ್ದರೆ ಇಷ್ಟೊತ್ತಿಗೆ ರಾಜ್ಯದಲ್ಲಿ‌ ಕಾಂಗ್ರೆಸ್ ನಾಯಕರು ಬೆಂಕಿ ಬಿರುಗಾಳಿ ಒಂದೆ ಮಾಡುತ್ತಿದ್ದರು. ಧರ್ಮಾಧಾರಿತ ಮೀಸಲಾತಿಯನ್ನು ಒಂದು ವೇಳೆ ನ್ಯಾಯಾಲಯ ಒಪ್ಪದಿದ್ದರೆ ನಾವು ಸಂವಿಧಾನ ಬದಲಾಯಿಸುತ್ತೇವೆ ಎಂಬ ಮಾತನ್ನು ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದು ಸಾಮಾಜಿಕ‌ ಜಾಲತಾಣದಲ್ಲಿ ಇದೆ ಇದನ್ನು ಮರೆತು ನನ್ನ ಹೇಳಿಕೆ ತಿರುಚಲಾಗಿದೆ ಎನ್ನುವದು ಹಾಸ್ಯಾಸ್ಪದ ಎಂದರು.
WhatsApp Group Join Now
Telegram Group Join Now
Share This Article