ದೇಶದ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಸೋವಾಶುಲ್ಕ ವಿಧಿಸುವಂತಿಲ್ಲ: ದೆಹಲಿ ಹೈಕೋರ್ಟ್‌ ಸೂಚನೆ

Ravi Talawar
ದೇಶದ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಸೋವಾಶುಲ್ಕ ವಿಧಿಸುವಂತಿಲ್ಲ: ದೆಹಲಿ ಹೈಕೋರ್ಟ್‌ ಸೂಚನೆ
WhatsApp Group Join Now
Telegram Group Join Now

ನವದೆಹಲಿ/ಹುಬ್ಬಳ್ಳಿ: ದೇಶಾದ್ಯಂತ ಯಾವುದೇ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ ಎಂದು ಶುಕ್ರವಾರ ದೆಹಲಿ ಹೈಕೋರ್ಟ್‌ ಮಹತ್ತರ ತೀರ್ಪು ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಎತ್ತಿ ಹಿಡಿದಿದೆ.

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ವಿಧಿಸಲಾಗುತ್ತಿದ್ದ ಸೇವಾ ಶುಲ್ಕ ನಿಷೇಧಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) 2019ರ ಕಾನೂನಿನ ಅನ್ವಯ ಈ ಹಿಂದೆ ಮಾರ್ಗಸೂಚಿ ಹೊರಡಿಸಿತ್ತು. ಆದರೆ, ನ್ಯಾಷನಲ್‌ ರೆಸ್ಟೋರೆಂಟ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ (NRAI) ಮತ್ತು ಫೆಡರೇಶನ್‌ ಆಫ್‌ ಹೋಟೆಲ್‌ ರೆಸ್ಟೋರೆಂಟ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಸಂಘಟನೆಗಳು ಇದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದವು.

ಇಂದು ವಿಚಾರಣೆ ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್‌, ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಹೊರಡಿಸಿದ್ದ ಸೇವಾ ಶುಲ್ಕ ನಿಷೇಧ ಮಾರ್ಗಸೂಚಿ ಮತ್ತು ಹೋಟೆಲ್‌ ರೆಸ್ಟೋರೆಂಟ್‌ ಅಸೋಸಿಯೇಷನ್‌ ವಾದವನ್ನು ಆಲಿಸಿ, ಅಂತಿಮವಾಗಿ CCPA ಹೊರಡಿಸಿದ ಮಾರ್ಗಸೂಚಿಯನ್ನು ಎತ್ತಿ ಹಿಡಿದಿದೆ. ಅಲ್ಲದೇ, ಹೋಟೆಲ್‌ ರೆಸ್ಟೋರೆಂಟ್‌ ಅಸೋಸಿಯೇಷನ್‌ಗೆ ದಂಡವನ್ನೂ ಸಹ ವಿಧಿಸಿದೆ.

ಸ್ವಯಂಪ್ರೇರಣೆಯಿಂದ ಕೊಟ್ಟರಷ್ಟೇ ತೆಗೆದುಕೊಳ್ಳಬಹುದು: ತೀರ್ಪಿನ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ, ದೆಹಲಿ ಹೈಕೋರ್ಟ್‌ ತೀರ್ಪಿನ ಅನ್ವಯ ಇನ್ನು ಮುಂದೆ ದೇಶದ ಯಾವುದೇ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ಕಡ್ಡಾಯವಾಗಿ ಅಥವಾ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ. ಗ್ರಾಹಕರೇ ಸ್ವಯಂ ಪ್ರೇರಣೆಯಿಂದ ನೀಡಿದರೆ ಮಾತ್ರ ತೆಗೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article