ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ; 16 ನಕ್ಸಲರು ಹತ

Ravi Talawar
ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ; 16 ನಕ್ಸಲರು ಹತ
WhatsApp Group Join Now
Telegram Group Join Now

ಸುಕ್ಮಾ ಮಾ,29: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು (ಮಾ.29) ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್ಕೌಂಟರ್ ನಡೆದಿದೆ. ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ ಪಿ ತಿಳಿಸಿದ್ದಾರೆ. ಕೆರ್ಲಾಪಾಲ್ ಪೊಲೀಸ್ ಠಾಣೆ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ನಕ್ಸಲ ವಿರೋಧಿ ಕಾರ್ಯಾಚರಣೆಗೆ ಭದ್ರತಾ ಪಡೆಗಳ ಜಂಟಿ ತಂಡ ಹೊರಟಿತ್ತು . ಈ ವೇಳೆ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆರ್ಲಾಪಾಲ್ ಪ್ರದೇಶದಲ್ಲಿ ಮಾವೋವಾದಿಗಳು ಬಿಡುಬಿಟ್ಟಿದ್ದರು ಎಂದು ಹೇಳಲಾಗಿದೆ. ಮಾಹಿತಿಯ ಆಧಾರದ ಮೇಲೆ ಶುಕ್ರವಾರ (ಮಾರ್ಚ್ 28) ರಾತ್ರಿ ಭದ್ರತಾ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದಾರೆ.

ಈ ಕಾರ್ಯಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಭಾಗಿಯಾಗಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಇದುವರೆಗೆ 16 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಸುಕ್ಮಾ ಪೊಲೀಸ್ ಠಾಣೆ ವ್ಯಾಪ್ತಿಯ ಕೆರ್ಲಪಾಲ್ ಪ್ರದೇಶದಲ್ಲಿ ನಕ್ಸಲರ ಇರುವ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಜಂಟಿ ತಂಡವು ಮಾರ್ಚ್ 28 ರಂದು ಶೋಧ ಕಾರ್ಯಾಚರಣೆಗೆ ತೆರಳಿದ್ದು, ಇಂದು (ಮಾರ್ಚ್ 29) ಬೆಳಗಿನ ಜಾವದಿಂದ ನಿರಂತರ ಗುಂಡಿನ ದಾಳಿ ಮುಂದುವರೆದಿದೆ.

WhatsApp Group Join Now
Telegram Group Join Now
Share This Article