ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ; ವಿದ್ಯಾರ್ಥಿಗಳ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Ravi Talawar
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ; ವಿದ್ಯಾರ್ಥಿಗಳ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
WhatsApp Group Join Now
Telegram Group Join Now
ಧಾರವಾಡ : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿಗಳ ಹಾಗೂ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು.
ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದರ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ 31, 2025 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ  [email protected] ಗೆ ಭೇಟಿ  ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article