ಭೋವಿ ನಿಗಮ ಬಹುಕೋಟಿ ಹಗರಣ​:ಮಹತ್ವದ ದಾಖಲೆ ಕಲೆಹಾಕಿದ ED

Ravi Talawar
ಭೋವಿ ನಿಗಮ ಬಹುಕೋಟಿ ಹಗರಣ​:ಮಹತ್ವದ ದಾಖಲೆ ಕಲೆಹಾಕಿದ ED
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್​ 07: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ  ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿಕೆ‌ ನಾಗರಾಜಪ್ಪರನ್ನು  ಬಂಧಿಸಿದ್ದು, 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ. ಇ.ಡಿ ತನಿಖೆ ವೇಳೆ ಭೋವಿ ಸಮುದಾಯದ ಏಜೆಂಟರ ಮೂಲಕ ಅಕ್ರಮ ಹಣ  ವರ್ಗಾವಣೆ ನಡೆದಿದ್ದು ಪತ್ತೆ ಆಗಿದೆ. ಹೀಗಾಗಿ ಬಿಕೆ‌ ನಾಗರಾಜಪ್ಪರನ್ನು ಬಂಧಿಸಿ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ.

ನಕಲಿ ಫಲಾನುಭವಿಗಳ ಖಾತೆ ಬಳಸಿಕೊಂಡು ಕೆಬಿಡಿಸಿಯಿಂದ ಹಣವನ್ನು ಫ್ರೆಂಡ್ಸ್, ಕುಟುಂಬ ಸದಸ್ಯರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದಡಿ ಬಂಧಿಸಲಾಗಿದೆ. ಬಳಿಕ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ಇ.ಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಏನು ಹಗರಣ?

2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂ. ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿತ್ತು.

WhatsApp Group Join Now
Telegram Group Join Now
Share This Article