ಧಾರವಾಡ: ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಪತ್ರಕರ್ತರಿಗೆ ಹಾಗೂ ಕ್ಯಾಮರಾ ಮೆನ್ ಅವರಿಗೆ ನೀಡುವ ಮಿಡಿಯಾ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ವಾರ್ತಾ ಇಲಾಖೆಯ ಸಹಾಯಕ ವಾರ್ತಾಧಿಕಾರಿ ಸುರೇಶ ಹಿರೇಮಠ ಇದ್ದರು.