ಬಳ್ಳಾರಿ, ಏಪ್ರಿಲ್ 19: ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ ಡ್ಯಾಂನಲ್ಲಿ ವರ್ಷದಿಂದ ವರ್ಷಕ್ಕೆ ಬಾರೀ ಪ್ರಮಾಣದ ಹೂಳು ತುಂಬಿಕೊಳ್ಳುತ್ತಿದೆ. ಡ್ಯಾಂನಲ್ಲಿ ಸಂಗ್ರಹವಾಗಿರುವ ಹೂಳನ್ನು ತೆಗೆಯುವಂತೆ ಆಗ್ರಹಿಸಿ ರೈತರು, ಜನರು ನಿರಂತರವಾಗಿ ಸರ್ಕಾರದ ವಿರುದ್ಧ ಹೋರಾಟಗಳನ್ನು ಮಾಡುತ್ತಲೇ ಬಂದಿದ್ದಾರೆ. ಆದರೆ, ಸರ್ಕಾರ ಸಾವಿರಾರು ರೂಪಾಯಿ ಖರ್ಚಾಗುತ್ತದೆ ಎಂದು ಸಬೂಬು ನೀಡುತ್ತಾ ಬರುತ್ತಿದೆ. ಹೀಗಾಗಿ ಈ ವರ್ಷವಾದರೂ ಹೂಳು ತೆಗೆಯಲಿ ಎಂಬುದು ರೈತರ ಒತ್ತಾಯವಾಗಿದೆ. ಡ್ಯಾಂ ನಿರ್ಮಾಣವಾದಾಗ ಸುಮಾರು 132 ಟಿಎಂಸಿ ನೀರನ್ನು ಸಂಗ್ರಹ ಮಾಡುವ ಸಾಮರ್ಥ ಹೊಂದಿತ್ತು. ಆದರೆ, ಕಾಲ ಕಳೆದಂತೆ ಹೂಳಿನ ಪ್ರಮಾಣ ಹೆಚ್ಚಾಗುತ್ತಿದ್ದರಿಂದ ಪ್ರಸ್ತುತ 105 ಟಿಎಂಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ.
ತುಂಗಭದ್ರಾ ಡ್ಯಾಂನಲ್ಲಿ ಬಾರೀ ಪ್ರಮಾಣದ ಹೂಳು; ಶೀಘ್ರ ಕ್ರಮಕ್ಕೆ ರೈತರ ಆಗ್ರಹ
