ರಾಜ್ಯದ ಹಲವೆಡೆ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಭಾರೀ ಮಳೆಯಿಂದ ಹಾಸನ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಹಲವು ಭಾಗಗಳಲ್ಲಿ ರಾತ್ರಿಯಿಡಿ ಮಳೆ ಬಿಟ್ಟುಬಿಡದೆ ಸುರಿದಿದೆ.
ಪೂರ್ವ ಮುಂಗಾರು ಮಳೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, 5 ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಭಾನುವಾರ ಮಳೆಯಾಗಿದೆ. ಮಂಗಳೂರಿನಲ್ಲಿ ದಾಖಲಾದ ಗರಿಷ್ಠ ತಾಪಮಾನ 33.1°C ಆಗಿದ್ದು, ಇದು ಸಾಮಾನ್ಯಕ್ಕಿಂತ ಸ್ವಲ್ಪ ಕಡಿಮೆ ಎಂದು ಐಎಂಡಿ ತಿಳಿಸಿದೆ.
ದರ ಜೊತೆಗೆ, ಅಂಡಮಾನ್ ಸಮುದ್ರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ EA ಮಟ್ಟದ ಹವಾಮಾನ ಪರಿಸ್ಥಿತಿ ಇದ್ದು, ಬಂಗಾಳ ಕೊಲ್ಲಿಯ ಮೇಲೆ 3.1 ಕಿ.ಮೀ. ಎತ್ತರದಲ್ಲಿ ಮೇಲಿನ ವಾಯು ಚಂಡಮಾರುತದ ಪ್ರಸರಣ ಗೋಚರಿಸುತ್ತಿದೆ. ಈ ವಾತಾವರಣದ ಬದಲಾವಣೆಗಳು ಕರ್ನಾಟಕದಲ್ಲಿ ಮಳೆಯ ಸಾಧ್ಯತೆಯನ್ನು ಹೆಚ್ಚಿಸಿವೆ.