ಬೆಂಗಳೂರು, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಕರ್ನಾಟಕದ ಅನೇಕ ಪ್ರವಾಸಿಗರು ಸದ್ಯ ಅಲ್ಲಿ ಸಿಲುಕಿದ್ದಾರೆ. ಅವರನ್ನು ಕರೆತರಲು ಕರ್ನಾಟಕ ಸರ್ಕಾರ 2 ತಂಡಗಳನ್ನು ಕಳುಹಿಸಿದೆ. ಸಚಿವ ಅನಿಲ್ ಲಾಡ್ ಅವರ ನೇತೃತ್ವದಲ್ಲಿ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಿದೆ. ರಾಜ್ಯದ ಪ್ರವಾಸಿಗರ ಸಂಬಂಧಿಕರು, ಕುಟುಂಬಸ್ಥರು ಈ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಸಹಾಯ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ.
ಕನ್ನಡಿಗರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಜಮ್ಮು ಮತ್ತು ಕಾಶ್ಮೀರ ಪ್ರವಾಸಕ್ಕೆ ತೆರಳಿದವರ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಸಂಬಂಧಿಕರು, ಸ್ನೇಹಿತರು, ಪರಿಚಯಸ್ಥರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ ಮಾಡಲಾಗಿದೆ.
ಕಾಶ್ಮೀರ ಉಗ್ರ ದಾಳಿ: ಕರ್ನಾಟಕ ಸಹಾಯವಾಣಿ ಸಂಖ್ಯೆಗಳು
- 080-43344334
- 080-43344335
- 080-43344336
- 080-43344342