ಬೆಂಗಳೂರು, ಏಪ್ರಿಲ್ 24: ನಮ್ಮ ದೇಶದಲ್ಲಿ ಉಗ್ರ ಚಟುವಟಿಕೆ ಇರಬಾರಬಾರದು. ಭಯೋತ್ಪಾದನೆಯನ್ನು ಸಂಪೂರ್ಣ ಮಟ್ಟ ಹಾಕಬೇಕು. ಕೇಂದ್ರ ಸರ್ಕಾರ ಎಲ್ಲಾ ಉಗ್ರರನ್ನು ನಾಶಪಡಿಸುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಜತೆ ನಾವೆಲ್ಲ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪಹಲ್ಗಾಂನಲ್ಲಿ ಉಗ್ರ ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಮಾನೀಯವಾದ ಕೃತ್ಯ ಇದು, ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಭಯೋತ್ಪಾದಕರ ದಾಳಿಯಲ್ಲಿ ಭರತ್ ಭೂಷಣ್, ಮಂಜುನಾಥ್ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಲ್ಲದೆ, ಭರತ್ ಭೂಷಣ್, ಮಂಜುನಾಥ್ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗುತ್ತದೆ. ಭರತ್ ಅಂತಿಮ ಸಂಸ್ಕಾರದಲ್ಲಿ ರಾಮಲಿಂಗಾರೆಡ್ಡಿ ಭಾಗಿಯಾಗುತ್ತಾರೆ. ಮಂಜುನಾಥ್ ಅಂತ್ಯಕ್ರಿಯೆಯಲ್ಲಿ ಮಧು ಬಂಗಾರಪ್ಪ ಭಾಗಿಯಾಗುತ್ತಾರೆ ಎಂದು ಅವರು ಹೇಳಿದರು.