ಬೆಂಗಳೂರು, ಏಪ್ರಿಲ್ 25: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹೆಸರೇಳಿಕೊಂಡು ಕೋಟ್ಯಂತರ ರೂ. ಮೌಲ್ಯದ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿ ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಗೌಡ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್ ಮೇಲೆ ಇಡಿ ಅಧಿಕಾರಿಗಳು ಗುರುವಾರ (ಏ.24) ರಂದು ದಾಳಿ ನಡೆಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಐಶ್ವರ್ಯ ಗೌಡ ಅವರ ಬೆನ್ಜ್ ಕಾರು ಬಳಸುತ್ತಿದ್ದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರ ಬೆಂಗಳೂರಿನ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಸತತ 28 ಗಂಟೆಗಳ ಕಾಲ ವಿನಯ ಕುಲಕರ್ಣಿ ಅವರ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸಿದರು.