ಬೆಳಗಾವಿ:ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ಕೈಗೊಳ್ಳತ್ತಿರುವ ಹಿನ್ನೆಲೆಯಲ್ಲಿ ಇಂದು ಸಿ.ಪಿ.ಎಡ್ ಮೈದಾನದಲ್ಲಿನ ಪೂರ್ವ ಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಮುಖಂಡರು ಪರಿಶೀಲನೆ ನಡೆಸಿದರು.